ಕೊಕ್ಕಡ: ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ ನೀಡಿ ಸಾಂತ್ವನ ತಿಳಿಸಿದರು. ಸರಕಾರದಿಂದ ಸಿಗಬೇಕಾದ ಪರಿಹಾರಕ್ಕೆ ರಕ್ಷಿತ್ ಶಿವರಾಂ ಅವರು ಅರಣ್ಯ ಸಚಿವರೊಂದಿಗೆ ಮಾತನಾಡಿದ್ದಾರೆ. ಶೀಘ್ರದಲ್ಲಿ ಪರಿಹಾರ ಸಿಗಲಿದೆ ಎಂದು ತಿಳಿಸಿದರು. ಸೌತಡ್ಕ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಗಣೇಶ್ ಕಾಶಿ ಹಾಗೂ ಕಾಂಗ್ರೆಸ್ ಮುಖಂಡರಾದ ಸುಚಿತ್ರ ಸಾಲಿಯಾನ್, ದಯಾನಿಶ್ ಕೊಕ್ಕಡ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕೊಕ್ಕಡ: ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಭೇಟಿ
