ಕೊಕ್ಕಡ: ಸಮೀಪದ ಹೂವಿನಕೊಪ್ಪಳ ಎಂಬಲ್ಲಿ ಗೋಡಂಬಿ ಪಾರ್ಸೆಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಗಾಯಗೊಂಡಿರುವ ಘಟನೆ ಜು.19ರಂದು ಸಂಜೆ ನಡೆದಿದೆ.
ಗಾಯಗೊಂಡ ಚಾಲಕನನ್ನು ನೆಲ್ಲಿಕಾರ್ ಮೂಲದ ಗಿರೀಶ್ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಅವರನ್ನು ಕೊಕ್ಕಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪವನ್ ಪಾರ್ಸೆಲ್ ಸಂಸ್ಥೆಗೆ ಸೇರಿದ ಈ ವಾಹನ ಕಾರ್ಕಳದಿಂದ ಬೆಂಗಳೂರಿಗೆ ಪಾರ್ಸೆಲ್ ಸಾಗಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.