ಧರ್ಮಸ್ಥಳದಲ್ಲಿ ಗ್ರಾಮದಲ್ಲಿ ಹಲವಾರು ಶವ ಹೂತಿದ್ದೆ ಎನ್ನುವ ದೂರು ಹಿನ್ನಲೆ-ಸರ್ಕಾರ ತನಿಖೆಗೆ ಎಸ್.ಐ. ಟಿ.ಗೆ ಹಸ್ತಾಂತರಿಸಿರುವುದು ಉತ್ತಮ-ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರಿಂದ ಪತ್ರಿಕಾ ಪ್ರಕಟಣೆ

0

ಧರ್ಮಸ್ಥಳ: ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿದ್ದೇನೆಂದು ವ್ಯಕ್ತಿಯೋರ್ವ ದೂರು ನೀಡಿದ್ದು,ಮತ್ತು ಸರ್ಕಾರ ಆ ತನಿಖೆಯನ್ನು ಎಸ್ ಐ ಟಿಗೆ ನೀಡಿರುವುದು ಉತ್ತಮ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ.ಪಾರ್ಶ್ವನಾಥ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್ ಐ ಟಿ ತನಿಖೆಯಿಂದ ಸತ್ಯಾಂಶ ಹೊರಬರಲಿ ಎಂದು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅವರು ಪತ್ರಿಕಾ ಪ್ರಕಟಣೆಯಲ್ಲಿ “ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ. ಕೆ. ಪಾರ್ಶ್ವನಾಥ್ ಜೈನ್
ವಕ್ತಾರರು, ಶ್ರೀ ಕ್ಷೇತ್ರ ಧರ್ಮಸ್ಥಳ, ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here