ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಇದರ ಸಭೆಯು ಮಂಗಳೂರಿನ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ವಿಶ್ವದ ಬಿಲ್ಲವರು ಸೇರಿ ನಿರ್ಮಿಸಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಮಾತೆ ದೇಯಿ ಬೈದ್ಯೆತಿ ಕೋಟಿ ಚೆನ್ನಯರ ಆದರ್ಶಗಳ ಜೊತೆ ನಾಟಿ ವೈದ್ಯದ ವಿಶೇಷತೆಯನ್ನು ಜಗತ್ತಿಗೆ ಸಾರುವ ಕೆಲಸ ಮಾಡುವ ಬಗ್ಗೆ ಟ್ರಸ್ಟ್ ಕೆಲಸ ಮಾಡಲಿದೆ ಎಂದರು.
ವಿಶ್ವದ ಬಿಲ್ಲವರನ್ನು ಸೇರಿಸಿಕೊಂಡು ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಕ್ಷೇತ್ರದ ಪಕ್ಕದಲ್ಲಿ ಕ್ಷೇತ್ರಾಡಳಿತ ಸಮಿತಿ ಖರೀದಿಸಿದ ಜಾಗದಲ್ಲಿ ಯಾತ್ರಿ ನಿವಾಸವನ್ನು ನಿರ್ಮಾಣ ಮಾಡುವ ಬಗ್ಗೆ ಮತ್ತು ಅದರ ಶಂಕುಸ್ಥಾಪನೆ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ವಾಸ್ತುತಜ್ಞ ಆರ್ಕಿಟೆಕ್ಟ್ ಪ್ರಮಲ್ ಕುಮಾರ್ ಕಾರ್ಕಳ, ಕ್ಷೇತ್ರಾಡಳಿತ ಉಪಾಧ್ಯಕ್ಷರು ಹಾಗೂ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಂ, ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು, ಟ್ರಸ್ಟ್ ನ ಕೋಶಾಧಿಕಾರಿ ಹರೀಶ್ ಸಾಲ್ಯಾನ್ ಬಜಗೋಳಿ, ಪ್ರಮುಖರಾದ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ನಾರಾಯಣ ಮಚ್ಚಿನ, ರಾಜೇಂದ್ರ ಚಿಲಿಂಬಿ, ಜಯವಿಕ್ರಂ ಕಲ್ಲಾಪು, ಹರೀಶ್ ಕೆ ಪೂಜಾರಿ, ಕುಮಾರ್ ಇರುವೈಲ್, ಜಯರಾಮ ಪೂಜಾರಿ ಬೆಳುವಾಯಿ, ಜಯರಾಂ ಬಂಗೇರ ಹೆರಾಜೆ ಬೆಳ್ತಂಗಡಿ ಮುಂತಾದವರು ಉಪಸ್ಥಿತರಿದ್ದರು.