ಕೊಕ್ಕಡ: ಪದ್ಮನಾಭ ಆಚಾರಿ ನಿಧನ

0

ಕೊಕ್ಕಡ: ಕೌಕ್ರಾಡಿ ಗ್ರಾಮದ ಕಟ್ಟೆಮಜಲು ನಿವಾಸಿ ಹಾಗೂ ಕೊಕ್ಕಡದ ಪ್ರಸಿದ್ಧ ಚಿನ್ನದ ವ್ಯಾಪಾರಿ ಪದ್ಮನಾಭ ಆಚಾರ್ಯ(52) ಅವರು ಜು.21ರಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಮಧ್ಯಾಹ್ನ ವೇಳೆಗೆ ತೀವ್ರ ಅಸ್ವಸ್ಥಗೊಂಡ ಅವರನ್ನು ತಕ್ಷಣವೇ ಕೊಕ್ಕಡದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆ, ನಂತರ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಅವರು ಕೊನೆಯುಸಿರೆಳೆದರು.

ಪದ್ಮನಾಭ ಆಚಾರಿ ಅವರು ಕೊಕ್ಕಡದಲ್ಲಿ ಹಲವು ವರ್ಷಗಳಿಂದ ಜ್ಯುವೆಲರಿ ಅಂಗಡಿ ನಡೆಸುತ್ತಿದ್ದರು. ಜೊತೆಗೆ ಕೊಕ್ಕಡದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸರಾಫ್ (ಚಿನ್ನ ತಜ್ಞ) ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ಪ್ರಾಮಾಣಿಕತೆ, ಶ್ರದ್ದೆ, ಹಾಗೂ ನಗದು ವ್ಯವಹಾರದಲ್ಲಿ ನಂಬಿಕೆ ಹೊಂದಿದ ವ್ಯಕ್ತಿಯಾಗಿದ್ದರು.
ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here