ಉಜಿರೆ: ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ ಜೀವನ್ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನೆಗಾಗಿ ಜು. 21ರಂದು ಉಜಿರೆ ಗ್ರಾಮ ಪಂಚಾಯಿತಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ, ಐ.ಎ.ಎಸ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಲ್ ಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿದ ನೀರಚಿಲುಮೆಯ ಕುಡಿಯುವ ನೀರಿನ ಸ್ಥಾವರವನ್ನು ಪರಿಶೀಲಿಸಿದರು. ಬಳಿಕ ಆದಿಪರಾಶಕ್ತಿ ಮಹಿಳಾ ಸ್ವಸಹಾಯ ಸಂಘದವರು ನಡೆಸುತ್ತಿರುವ ಅಕ್ಕ ಕೆಫೆ, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ನಡೆಸುತ್ತಿರುವ ಹಳ್ಳಿ ಸಂತೆಯನ್ನು, ಕೂಸಿನ ಮನೆ, ಡಿಜಿಟಲ್ ಅರಿವು ಕೇಂದ್ರ ಮತ್ತು ಪಂಚಾಯತ್ ಕಚೇರಿಗೆ ಭೇಟಿ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ.ಹೆಚ್., ಕಾರ್ಯದರ್ಶಿ ಶ್ರವಣ್ ಕುಮಾರ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಪಂಪು ಆಪರೇಟರ್ ಉಪಸ್ಥಿತರಿದ್ದರು.