ಬಂದಾರು: ಗ್ರಾಮ ಪೆರ್ಲ-ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜು. 21ರಂದು ನಡೆಯಿತು. ಕೊಠಡಿಯ ಉದ್ಘಾಟನೆಯನ್ನು ಮಾನ್ಯ ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಮಾತನಾಡುತ್ತಾ ಅವರು ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವುದರ ಮೂಲಕ ಶಾಲೆಯನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ. ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ದೊರೆಯುತ್ತಿದ್ದು, ಶಾಲೆಗಳನ್ನು ಉಳಿಸಿಕೊಳ್ಳುವತ್ತ ಊರಿನವರು ಗಮನ ಹರಿಸಬೇಕಾಗಿದೆ ಎಂದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತ ಕೆ. ಕುರುಡಂಗೆ, ಭಾರತಿ ಕೋಡಿಯೆಲ್, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ, ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಹೊನ್ನಪ್ಪ ಗೌಡ, ಡೀಕಯ್ಯ ಗೌಡ, ಪೆರ್ಲ- ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಉಮೇಶ್ ಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ದಾಮೋದರ ಗೌಡ ಕಾಡoಡ, ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು ಹಾಗೂ ಊರಿನ ನಾಗರೀಕರು ಪಾಲ್ಗೊಂಡಿದ್ದರು.