ಬೆಳ್ತಂಗಡಿ: ಇನ್ನು ಮುಂದೆ ದ್ವೇಷ ಭಾಷಣ ಮಾಡಬಾರದು ಮತ್ತು ಈಗಾಗಲೇ ದಾಖಲಾಗಿರುವ ಸೆಕ್ಷನ್‌ಗಳ ಅಪರಾಧವನ್ನು ಪುನರಾವರ್ತಿಸಬಾರದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಜು.೧೧ರಂದು ಹೈಕೋರ್ಟ್ ಆದೇಶ ನೀಡಿದೆ.
ತೆಕ್ಕಾರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಭಾಷಣ ಮಾಡಿದ ವೇಳೆ ಕೋಮು ಗಲಭೆಗಳಿಗೆ ಪ್ರಚೋದನೆ ನೀಡಿದ ಹಾಗೂ ಮುಸ್ಲಿಮ್ ಸಮುದಾಯವನ್ನು ತುಚ್ಛೀಕರಿದ ಆರೋಪದಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆದ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಕೋಮು ದ್ವೇಷ ಭಾಷಣಗಳಿಗೆ ಸಂಬಂಧಿಸಿದ ಅಪರಾಧಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತಿಗೆ ಒಳಪಟ್ಟು ಹರೀಶ್ ಪೂಂಜ ಅವರ ವಿರುದ್ಧ ಬಂಧನ ಸಹಿತ ಬಲವಂತದ ಕ್ರಮ ಜರಗಿಸಬಾರದು ಎಂದು ನೀಡಲಾಗಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿ ಈ ಆದೇಶ ಮಾಡಿದ್ದಾರೆ.
ವಿಚಾರಣೆ ಮುಂದೂಡಿಕೆ: ಕೋಮು ದ್ವೇಷ ಹರಡುವ ಭಾಷಣ ಮಾಡಿದ ಆರೋಪದಡಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆದ ವೇಳೆ ಉಭಯ ಬಣಗಳ ವಾದ ಪ್ರತಿವಾದ ಆಲಿಸಿ ದ್ವೇಷ ಭಾಷಣ ಮಾಡಬಾರದು ಮತ್ತು ಅಪರಾಧ ಪುನರಾವರ್ತಿಸಬಾರದು ಎಂದು ಹರೀಶ್ ಪೂಂಜ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿದರು.
ಅರ್ಜಿ ವಿಚಾರಣೆಯ ಆರಂಭದಲ್ಲಿ ಸರಕಾರದ ಪರ ವಕೀಲರು ಮತ್ತು ಹರೀಶ್ ಪೂಂಜ ಪರ ವಕೀಲರು ವಾದ ಮಂಡನೆಗೆ ಸಮಯಾವಕಾಶ ಕೇಳಿದರು. ಆದರೆ ಇಬ್ರಾಹಿಂ ಪರ ವಕೀಲ ಎಸ್. ಬಾಲನ್ ಅವರು ಸಮಯಾವಕಾಶ ನೀಡುವುದನ್ನು ವಿರೋಧಿಸಿ ವಾದ ಪ್ರಾರಂಭಿಸಿದರು. ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸದೇ ಇದ್ದರೆ ಅವರು ಅಪರಾಧವನ್ನು ಪುನರಾವರ್ತಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆ ಸೃಷ್ಟಿಸಿ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆಯುತ್ತಾರೆ. ಇದು ಸರಿಯಾದ ಕ್ರಮವಲ್ಲ ಎಂದು ಎಸ್. ಬಾಲನ್ ವಾದಿಸಿದರು. ಆ ವೇಳೆ ನ್ಯಾಯಮೂರ್ತಿಗಳು ದ್ವೇಷ ಭಾಷಣ ಮಾಡದಂತೆ ಮತ್ತು ಈಗಾಗಲೇ ದಾಖಲಾಗಿರುವ ಸೆಕ್ಷನ್‌ಗಳ ಅಪರಾಧವನ್ನು ಪುನರಾವರ್ತನೆ ಮಾಡದಂತೆ ಸೂಚಿಸಿದರು. ಅಲ್ಲದೆ ಹರೀಶ್ ಪೂಂಜ ಅವರ ವಿರುದ್ಧ ಬಂಧನ ಸಹಿತ ಬಲವಂತದ ಕ್ರಮ ಜರಗಿಸಬಾರದು ಎಂದು ನೀಡಲಾಗಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿ ವಿಚಾರಣೆ ಮುಂದೂಡಿದರು.
ಹರೀಶ್ ಪೂಂಜ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕ್ರೈಂ ನಂ ೩೯/೨೦೨೩(ಐPಇ೧೫೩, ೧೫೩-ಅ, ೫೦೫(೧)(೩)(), ೫೦೫(೨), ಧರ್ಮಸ್ಥಳ ಠಾಣೆಯಲ್ಲಿ ಕ್ರೈಂ ನಂ ೫೭/೨೦೨೪ (ಐPಇ ೫೦೪, ೩೫೩), ಬೆಳ್ತಂಗಡಿ ಠಾಣೆಯಲ್ಲಿ ಕ್ರೈಂ ನಂ ೫೮/೨೦೨೪(ಐPಇ೧೪೩, ೧೪೭, ೩೪೧, ೫೦೪, ೫೦೬ /ಡಿ ೧೪೯), ಬಜ್ಪೆ ಠಾಣೆಯಲ್ಲಿ ಕ್ರೈಂ ನಂ ೨೩೯/೨೦೧೬ (ಐPಇ ೧೪೩, ೧೪೭, ೨೯೦, ೧೬೦, ೫೦೪ /ಡಿ ೧೪೯), ಬಂಟ್ವಾಳ ಠಾಣೆಯಲ್ಲಿ ಕ್ರೈಂ ನಂ ೧೧೭/೨೦೧೭(ಐPಇ೧೪೨, ೧೪೩, ೧೮೮ /ಡಿ ೧೪೯), ಧರ್ಮಸ್ಥಳ ಠಾಣೆಯಲ್ಲಿ ಕ್ರೈಂ ನಂ ೭೭/೨೦೨೩(ಐPಇ ೧೪೩, ೩೫೩, ೫೦೪ /ಡಿ ೧೪೯), ಬೆಳ್ತಂಗಡಿ ಠಾಣೆಯಲ್ಲಿ ಕ್ರೈಂ ನಂ ೧೦೫/೨೦೨೩ (ಐPಇ ೫೦೪, ೫೦೫(೨) ಎಫ್‌ಐಆರ್ ಗಳು ದಾಖಲಾಗಿದೆ. ಪುನರಾವರ್ತಿತ ಅಪರಾಧ ಮಾಡುವ ಹರೀಶ್ ಪೂಂಜ ತಡೆಯಾಜ್ಞೆಯ ಅವಕಾಶಕ್ಕೆ ಅನರ್ಹರಾಗಿದ್ದಾರೆ ಎಂದು ಬಾಲನ್ ನ್ಯಾಯಪೀಠದ ಗಮನ ಸೆಳೆದಿದ್ದಾರೆ ಎಂದು ತಿಳಿದು ಬಂದಿದೆ.