ಬೆಳ್ತಂಗಡಿ: ವಿವಿಧ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ನಕ್ಸಲ್ ರೂಪೇಶ್ ಪಿ.ಆರ್.(57ವ) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್ಪಿ ವಿಜಯಪ್ರಸಾದ್ ನೇತೃತ್ವದ ತಂಡ ನಕ್ಸಲ್ ರೂಪೇಶ್ ಪಿ.ಆರ್. ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ಮೂಲಕ ಜು. 22ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೆ 3ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ.