ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಯಾವ ಅಧಿಕಾರಿಯೂ ಹಿಂದೆ ಸರಿದಿಲ್ಲ: ಗೃಹ ಸಚಿವ ಸ್ಪಷ್ಟನೆ-ಎಸ್.ಐ.ಟಿ ತಂಡಕ್ಕೆ 20 ಅಧಿಕಾರಿಗಳ ತಂಡ ಸೇರ್ಪಡೆ

0

ಧರ್ಮಸ್ಥಳ: ಗ್ರಾಮದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಯಾವ ಅಧಿಕಾರಿಗಳೂ ಹಿಂದೆ ಸರಿದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಧರ್ಮಸ್ಥಳ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಇಂದಿನಿಂದ ತನಿಖಾ ತಂಡ ಅಖಾಡಕ್ಕೆ ಇಳಿಯಲಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಜು.23ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ.

ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ. ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರೋ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ, ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್‌ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಬಳಿಕ ಅಧಿಕೃತವಾಗಿ ಪ್ರಕರಣ ಎಸ್‌ಐಟಿಗೆ ಹಸ್ತಾಂತರವಾಗಲಿದೆ.

ಇದಕ್ಕಾಗಿ ಪ್ರಣವ್ ಮೊಹಾಂತಿ‌ ನೇತೃತ್ವದ ಎಂ.ಎನ್.ಅನುಚೇತ್, ಸೌಮ್ಯಲತಾ, ಜಿತೇಂದ್ರ ಕುಮಾರ್, ಸೈಮನ್, ಇವರ ನಾಲ್ವರ ಎಸ್​​ಐಟಿ ತಂಡಕ್ಕೆ 20 ಮಂದಿ ಹೊಸ ಟೀಂ ನಿಯೋಜನೆ ಮಾಡಿದ ಡಿಜಿಪಿ ಸಲೀಂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದ ಪೊಲೀಸ್​ ಅಧಿಕಾರಿಗಳು ಐವರು ಐಪಿಎಸ್​, ಇಬ್ಬರು ಡಿಎಸ್​ಪಿ, 6 ಜನ ಇನ್ಸ್​ಪೆಕ್ಟರ್​ಗಳು, 8 ಮಂದಿ ಸಬ್​​ಇನ್ಸ್​ಪೆಕ್ಟರ್​ ಸೇರಿ ಒಟ್ಟು 20 ಹೆಚ್ಚುವರಿಗೆ ಅಧಿಕಾರಿಗಳು ಹೆಚ್ಚುವರಿಯಾಗಿ ನೇಮಕಗೊಂಡಿರುವ ಅಧಿಕಾರಿಗಳಲ್ಲಿ, ಮಂಗಳೂರು ಡಿಸಿಆರ್‌ಇ ಎಸ್ಪಿ. ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ, ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್‌ ಇ.ಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್‌ಪೆಕ್ಟರ್‌ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಆರ್.ಸುಹಾಸ್, ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್‌ಪೆಕ್ಟರ್‌ ವಿನೋದ್ ಎಸ್. ಕಾಳಪ್ಪನವರ್,
ಮಂಗಳೂರು ಮೆಸ್ಕಾಂ ಸಬ್‌ಇನ್ಸ್‌ಪೆಕ್ಟರ್‌ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೇಬಲ್ ದೇವರಾಜ್ ಅವರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here