Site icon Suddi Belthangady

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ ಜರುಗಿತು. ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ಸ್ಟ್ಯಾನಿ ಗೋವಿಯಸ್ ಸಭೆಯ ಅಧ್ಯಕ್ಷತೆ ವಹಿಸಿ ಸಂಘದ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು‌‌. ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿ ಸಂಘ ಪಾತ್ರ ಬಹಳ ಮಹತ್ವದ್ದು‌ ಎಂದು ಹೇಳಿದರು.

ಸಂಘದ ಅಧ್ಯಕ್ಷ ರಾಜಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ಲೆಕ್ಕ ಪತ್ರ ಮಂಡಿಸಿದರು. ಸಂಘದ ಕಾರ್ಯದರ್ಶಿ ಅಶ್ವಿನಿ ಪಿ. ವರದಿ ವಾಚಿಸಿದರು. ಸಭೆಯಲ್ಲಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಜತೆ ಕಾರ್ಯದರ್ಶಿ ಲವೀನಾ ಜಾನೆಟ್ ಪಿಂಟೋ ವಂದಿಸಿದರು.

Exit mobile version