
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ SDM-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “MS Excel with Power BI” ಕುರಿತು ಮೂರು ದಿನಗಳ ಅವಧಿಯ ಐದು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿತು.

ಜು.10ರಂದು ಪ್ರಾರಂಭವಾಗಿ ಜು. 24ರಂದು ಮುಕ್ತಾಯವಾಯಿತು. ಪ್ರತಿ ಮೂರೂ ದಿನಗಳಿಗೆ ಒಂದು ತರಗತಿಯ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿರುತ್ತಾರೆ. ಅದೇ ಪ್ರಕಾರ ಬಿಕಾಂ ಮತ್ತು ಬಿಬಿಎ ಅಂತಿಮ ತರಗತಿಯ ವಿದ್ಯಾರ್ಥಿಗಳು ಒಟ್ಟು ಐದು ತರಗತಿಗಳಿಂದ ಹದಿನೈದು ದಿನಗಳ ಅವಧಿಯಲ್ಲಿ 389 ವಿದ್ಯಾರ್ಥಿಗಳು ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಆರ್ಯ ಚಾಣಕ್ಯ ಟೆಕ್ನಾಲಜಿ ಲಿಮಿಟೆಡ್‌ನ ನುರಿತ ತರಬೇತುದಾರ ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ನಾರಾಯಣ ಕೆ. ಅವರು ಈ ತರಬೇತಿಯ ನೇತೃತ್ವ ವಹಿಸಿದ್ದರು. ತಮ್ಮ ಉದ್ಯಮದ ಅನುಭವ ಮತ್ತು ತಾಂತ್ರಿಕ ಪರಿಣತಿಯೊಂದಿಗೆ, ನಾರಾಯಣ ಕೆ. ಅವರು ವಿದ್ಯಾರ್ಥಿಗಳಿಗೆ ಡೇಟಾ ನಿರ್ವಹಣೆಗಾಗಿ MS Excel with Power BI ಪಾತ್ರ ಮತ್ತು ವ್ಯವಹಾರ ಕ್ಷೇತ್ರದಲ್ಲಿ ವರದಿ ಮಾಡಲು MS Excel with Power BI ನ ಪ್ರಾಯೋಗಿಕ ಕೌಶಲ್ಯ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.

ವಿನ್ಯಾಸಗೊಳಿಸಲಾದ ತರಬೇತಿಯಲ್ಲಿ ಸಮಗ್ರ ಆಧುನಿಕ ಕೈಗಾರಿಕೆಗಳಲ್ಲಿ ಬಳಸುವ ದತ್ತಾಂಶ ವಿಶ್ಲೇಷಣೆ ಮತ್ತು ವರದಿ ಮಾಡುವ ಸಾಧನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಡಿಜಿಟಲ್ ವಿಶ್ಲೇಷಣೆ ಮತ್ತು ವ್ಯವಹಾರ MS Excel with Power BI ನ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ವ್ಯಕ್ತಪಡಿಸಿ ಕಲಿತುಕೊಂಡರು. ಈ ತರಬೇತಿ ಕಾರ್ಯಾಗಾರದಲ್ಲಿ ಅಂತಿಮ ವರ್ಷದ ಬಿಕಾಂ ಮತ್ತು ಬಿಬಿಎ ವಿಭಾಗದಿಂದ 389 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ಅವರು ಕಾರ್ಯಕ್ರಮವನ್ನು ಸಂಘಟಿಸಿದರು.