
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ನಿಡಿಗಲ್ – ಸೀಟು ಮಧ್ಯೆ ಹೆದ್ದಾರಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಜು.24ರಂದು ನಡೆದಿದೆ.
ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿದ ಕಾರಣ ಸುಮಾರು ಅರ್ಧ ತಾಸಿಗಿಂತ ಅಧಿಕ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಮರ ಉರುಳುವ ವೇಳೆ ಈ ಪ್ರದೇಶದಲ್ಲಿ ವಾಹನಗಳ ಸಂಚಾರ ಇರದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಮುಂಡಾಜೆ ಗ್ರಾ.ಪಂ., ಪೊಲೀಸ್, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಮರ ತೆರವು ಕಾರ್ಯ ನಡೆಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.