


ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗಬೇಕು, ಅಪಪ್ರಚಾರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿ ಜು.25ರಂದು ಮುಂಜಾನೆ
ಬೆಂಗಳೂರು, ಮಂಡ್ಯ ಕರವೇ ಮಹಿಳಾ ತಂಡದ ಸದಸ್ಯರು ಉರುಳು ಸೇವೆ ಮಾಡಿದರು.





ಸುಮಾರು 40 ಜನ ಮಹಿಳೆಯರು ಬೆಳಗ್ಗೆ ಉರುಳು ಸೇವೆ ಮಾಡಿ ನಂತರ ದೇವರ ದರ್ಶನ ಪಡೆದು ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಶ್ರೀ ಮಂಜುನಾಥ ಸ್ವಾಮಿ ಸದ್ಬುದ್ಧಿಯನ್ನು ಕೊಡಲಿ ಹಾಗೂ ಸೌಜನ್ಯ ಪ್ರಕರಣ ಶೀಘ್ರ ಇತ್ಯರ್ಥವಾಗಲಿ, ಧರ್ಮಸ್ಥಳಕ್ಕೆ ಅಂಟಿರುವ ಕಂಟಕ ದೂರವಾಗಲಿ ಎಂದು ಕರವೇ ಮಹಿಳಾ ಘಟಕದ ವತಿಯಿಂದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ಉರುಳು ಸೇವೆ ಸಲ್ಲಿಸಿದರು.









