
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಧರ್ಮಸ್ಥಳಕ್ಕೆ ಆಗಮಿಸಲಿರುವ ಎಸ್.ಐ.ಟಿ. ತಂಡದ ಅಧಿಕಾರಿಗಳು ಜು.25ರಂದು ಮಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಮಂಗಳೂರಿಗೆ ಈಗಾಗಲೇ ಎಸ್.ಐ.ಟಿ.ತಂಡದಲ್ಲಿರುವ ಡಿಐಜಿ ಎಂ.ಎನ್. ಅನುಚೇತ್ ರವರು ತಂಡದ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿರುವ ನಿಗೂಢ ಸಾವು ಪ್ರಕರಣಗಳ ತನಿಖೆಗಾಗಿ ರಚನೆಗೊಂಡಿರುವ ವಿಶೇಷ ತನಿಖಾ ತಂಡ ಜು. 26ರಂದು ಬೆಳ್ತಂಗಡಿಗೆ ಆಗಮಿಸಲಿದೆ.
ಈಗಾಗಲೇ ಬೆಂಗಳೂರಿನಿಂದ ಮಂಗಳೂರಿಗೆ ಎಸ್.ಐ.ಟಿ. ತಂಡ ಬಂದಿಳಿದಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದ ತಂಡ ಬೆಳ್ತಂಗಡಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ಜು.26ರಂದು ಭೇಟಿ ನೀಡಿ ತನಿಖೆ ಆರಂಭಿಸಲಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದಕ್ಕೆ ಮುಂಚಿತವಾಗಿ ಅನುಚೇತ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.