
ಬೆಳ್ತಂಗಡಿ: ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರವು ಈಗಾಗಲೇ ಮೂರು ಕೋಟಿ ರೂ. ಅನುದಾನ ಮಂಜೂರಾಗೊಳಿಸಿದ್ದು ಶೀಘ್ರವಾಗಿ ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿ ಪ್ರಾರಂಭಿಸುವಂತೆ ಹಾಗೂ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನವನ್ನು ಸರಕಾರದಿಂದ ಒದಗಿಸುವಂತೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಮಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ತಾಲೂಕು ಮಟ್ಟದ ಅಂಬೇಡ್ಕರ್ ಭವನದ ನೀವೇಶನದ ಪಹಣಿ ಪತ್ರದ ಬಗ್ಗೆ ಸಚಿವರಲ್ಲಿ ವಿನಂತಿಸಿಕೊಂಡಿದ್ದು, ಸಚಿವರು ಸ್ಥಳದಲ್ಲೇ ದೂರವಾಣಿ ಮೂಲಕ ಈ ಬಗ್ಗೆ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಟಣ, ದಲಿತ ಸಂಘರ್ಷ ಸಮಿತಿಯ ಮುಖಂಡರುಗಳಾದ ಬಿ.ಕೆ., ವಸಂತ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ ಕುಕ್ಕೇಡಿ, ಮುಖಂಡರುಗಳಾದ ಚೆನ್ನಕೇಶವ, ಸಂಜೀವ ಆರ್., ವೆಂಕಣ್ಣ ಕೊಯ್ಯೂರು, ರಮೇಶ್ ಆರ್., ಪ್ರಭಾಕರ ಓಡಿಲ್ನಾಳ ಮತ್ತಿತರರು ಉಪಸ್ಥಿತರಿದ್ದರು.