Site icon Suddi Belthangady

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ: ಪ್ರತಿಭಾ ಪುರಸ್ಕಾರ ಮತ್ತು ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸಾಧನಾ ಪುರಸ್ಕಾರ ನೀಡುವ ಬಗ್ಗೆ ಚರ್ಚೆ

ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆಯು ಜು.27ರಂದು ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿರುವ ಸಂಘದ ಕಾರ್ಯಕಾರಿ ಸಮಿತಿಯ ಪತ್ರಿಕಾ ಮಾದ್ಯಮ ಕಾರ್ಯದರ್ಶಿ ಶರತ್ ನಾಯ್ಕ ಕಣಿಯೂರು ಅವರ ಮನೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್ ಎಚ್.ಎಲ್. ಅವರು ವಹಿಸಿದ್ದರು. ಸಭೆಯಲ್ಲಿ ಗೌರವಾಧ್ಯಕ್ಷ ಕೊರಗಪ್ಪ ನಾಯ್ಕ, ಉಪಾಧ್ಯಕ್ಷ ಪ್ರಭಾಕರ ನಾಯ್ಕ್, ಪ್ರಧಾನ ಕಾರ್ಯದರ್ಶಿ ತಾರನಾಥ ನಾಯ್ಕ, ಕಾರ್ಯದರ್ಶಿಗಳಾದ ಸುರೇಶ್ ಎಚ್.ಎಲ್., ಪವಿತ್ರಾ ಲೋಕೇಶ್, ಕೋಶಾಧಿಕಾರಿ ಹರೀಶ್ ಪೆರಾಜೆ, ಮಾಧ್ಯಮ ಕಾರ್ಯದರ್ಶಿಗಳಾದ ಹರ್ಷಿತ್ ಪಿಂಡಿವನ, ಶರತ್ ನಾಯ್ಕ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್, ರಜನೀಶ್ ನಾಯ್ಕ, ಚಂದ್ರಾವತಿ, ರಾಘವೇಂದ್ರ ನಾಯ್ಕ, ವಿಶಾಲ ಹಾಗೂ ಇತರರು ಭಾಗವಹಿಸಿದ್ದರು.

ತಾಲೂಕು ಮರಾಟಿ ಸಂಘದಿಂದ ಇದೇ ಪ್ರಥಮ ಬಾರಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಮಹಾಸಭೆಯನ್ನು ನಡೆಸುವ ಬಗ್ಗೆ ಮತ್ತು ವಾರ್ಷಿಕ ಮಹಾಸಭೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸಾಧನಾ ಪುರಸ್ಕಾರ ನೀಡುವ ಬಗ್ಗೆ ಚರ್ಚಿಸಲಾಯಿತು. ತಾಲೂಕಿನ ಮರಾಟಿ ಸಮಾಜದ ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಸಂಘಕ್ಕೆ ತಮ್ಮ ಅಂಕ ಪಟ್ಟಿಯೊಂದಿಗೆ ಮಾಹಿತಿ ನೀಡುವಂತೆ ವಿನಂತಿಸಲಾಯಿತು.

ಶರತ್ ನಾಯ್ಕ ಅವರು ಸ್ವಾಗತಿಸಿದರು. ಪವಿತ್ರಾ ಲೋಕೇಶ್ ಅವರ ಧನ್ಯವಾದದೊಂದಿಗೆ ಮುಕ್ತಾಯವಾಯಿತು.

Exit mobile version