

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೆ. ಎಂ. ಸಿ. ಆಸ್ಪತ್ರೆ ಮಂಗಳೂರು ಇವರ ಸಹಾಭಾಗಿತ್ವದಲ್ಲಿ ಧರ್ಮಸ್ಥಳ ಸಹಕಾರ ಸಂಘದ ಅಟಲ್ ಜೀ ಸಭಾ ಭವನದಲ್ಲಿ ಜು. 27ರಂದು ಹೃದಯಘಾತ ಸಂಭವಿಸುವ ಸಂಧರ್ಭದಲ್ಲಿ ಮಾಡಬೇಕಾದ ತುರ್ತು ಚಿಕಿತ್ಸಾ ವಿಧಾನ (CPR)ಎಂಬ ಕಾರ್ಯಕ್ರಮ ನಡೆಯಿತು. ಶಾರದಾ ಕ್ಲಿನಿಕ್ ಡಾ. ಸಂಧ್ಯಾ ಸುಮನ್ ಕಾರ್ಯಕ್ರಮ ಉದ್ಘಾಟಿಸಿದರು, ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಅನಿಕೇತ್ ಮಾಹಿತಿ ನೀಡಿದರು.

ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಶ್ರೀ ಧ. ಮ. ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಜೈನ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಭಟ್, ಮನಿಪಾಲ ಆಸ್ಪತ್ರೆ ಯ ಚೇತನ್, ಧರ್ಮಸ್ಥಳ ಸಹಕಾರ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹ ಣಾಧಿಕಾರಿ ಶಶಿಧರ್, ಸಿಬ್ಬಂದಿ ವರ್ಗ, ಸದಸ್ಯರು ಉಪಸ್ಥಿತರಿದ್ದರು. ಸಿಬ್ಬಂದಿ ಸ್ವರ್ಣಶ್ರೀ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ನೀಲಕಂಠ ಶೆಟ್ಟಿ ವಂದಿಸಿದರು.