ಆ.2-3: ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಮಹಿಳಾ ಯಕ್ಷ ಸಂಭ್ರಮ- ಪತ್ರಿಕಾಗೋಷ್ಠಿ

0

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಬೆಳ್ತಂಗಡಿ ಯಕ್ಷ ಸಂಭ್ರಮ ಮತ್ತು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸಹಕಾರದೊಂದಿಗೆ ಉಜಿರೆ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಂಗಣದಲ್ಲಿ ಮಹಿಳಾ ಯಕ್ಷ ಸಂಭ್ರಮ ಆ. 2 ಮತ್ತು 3ರಂದು ವಿವಿಧ ಕಾರ್ಯಕ್ರಮ ನಡೆಯಲಿದೆ. ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ. ಬೆಳಾಲು ಹೇಳಿದರು.

ಅವರು ಜು. 28ರಂದು ಉಜಿರೆ ಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಕಾರ್ಯಕ್ರಮಗಳ ವಿವರ ನೀಡಿದರು. ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಕ್ಷಗಾನ ಅಕಾಡೆಮಿ ವತಿಯಿಂದ ಹಲವು ವರ್ಷಗಳಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಹಿಳೆಯರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಉಜಿರೆ ಯಲ್ಲಿ 2 ದಿನಗಳ ಯಕ್ಷಸಂಭ್ರಮ ಜರಗಲಿದೆ. ಆ.2ರಂದು ಬೆಳಿಗ್ಗೆ 10ರಿಂದ ಮಂಗಳೂರು ಮಹಾದೇವ ಯಕ್ಷ ಕಲಾ ತಂಡದಿಂದ ಪೂರ್ವರಂಗ, ಬಳಿಕ ಯಕ್ಷ ಕಲಾ ಸಂಗಮದಿಂದ ಅಬ್ಬರದ ಚಂಡ,
11:30 ರಿಂದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ದೀಪ ಪ್ರಜ್ವಲನೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್ ಕೃಷ್ಣ ಪಡ್ಡೆಟ್ನಾಯ ನೆರವೇರಿಸಲಿರುವರು.

ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಲಿರುವರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ದ ಉಪಾಧ್ಯಕ್ಷೆ ಪುಷ್ಪಾ ಅಮರ ನಾಥ್, ಹಿಂದುಳಿದ ವರ್ಗಗಳ ಆಯೋಗ ದ ಸದಸ್ಯೆ ಪ್ರತಿಭಾ ಕುಳಾಯಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಯಕ್ಷಗಾನ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ. ನಾಗೇಶ್ ಕುಮಾರ್ ಗೌಡ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಮಿತಾ ಭಾಗವಹಿಸ ಲಿದ್ದಾರೆ. ಮಧ್ಯಾಹ್ನ ಬಡಗುತಿಟ್ಟು ಯಕ್ಷಗಾನ ಲವ ಕುಶ,- ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ನರಕಾಸುರ – ಗರುಡ ಗರ್ವ ಭಂಗ ನಡೆಯಲಿದೆ.

ಆ.3ರಂದು ಬೆಳಗ್ಗೆ ಮಹಿಳೆ ಮತ್ತು ತಾಳಮದ್ದಳೆ ಸಂಘಟನೆ, ಯಕ್ಷಗಾನ-ಸ್ತ್ರೀ ಅಭಿವ್ಯಕ್ತಿಯ ಹೊಸ ಸಾಧ್ಯತೆಗಳು, ಯಕ್ಷಗಾನ ಕಲಾವಿದರ ಪರಿವಾರದ ಮಹಿಳೆಯರು ವಿಚಾರದ ಬಗ್ಗೆ ವಿಚಾರ ಗೋಷ್ಠಿ, ಮೂಡಲಪಾಯ ಯಕ್ಷಗಾನ ಪ್ರದರ್ಶನ, ತಾಳಮದ್ದಳೆ, ಉದಯನ್ನೋಖ ಮಹಿಳಾ ಭಾಗವತರ ಕೂಡುವಿಕೆಯಿಂದ ಗಾನವೈಭವ ನಡೆಯಲಿದೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್,ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚದ್ರ ಎಸ್., ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರa ಅಧ್ಯಕ್ಷ ಸತೀಶ್ ಕಾಶಿಪಟ್ನ, ಉಜಿರೆ ಗ್ರಾ. ಪ. ಉಪಾಧ್ಯಕ್ಷ ರವಿಕುಮಾರ್ ಬರೆ ಮೇಲು, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆದ ವಿನುತಾ ರಜತ ಗೌಡ ಭಾಗವಹಿಸಲಿರುವ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶರತ್ ಕೃಷ್ಣ ಪಡುವೆಟ್ನಾಯ ಉಜಿರೆ, ಉದ್ಯಮಿ ಮೋಹನ್ ಶೆಟ್ಟಿಗಾ‌ರ್, ಬೆಳ್ತಂಗಡಿ ನಗರ ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ, ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟದ ವಿನುತಾ ರಜತ್ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here