ವಿದ್ವತ್ ಪಿ.ಯು. ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ” ಆಚರಣೆ

0

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ವಿದ್ವತ್ ಪಿ.ಯು. ಕಾಲೇಜಿನಲ್ಲಿ ಜು. 26ರಂದು “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ. ಮಂಡಗಳಲೆ ಮಾತನಾಡಿ, 1999ರ ಕಾರ್ಗಿಲ್ ಯುದ್ಧದಲ್ಲಿ ಪ್ರಾಣತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯವನ್ನು ಗೌರವಿಸಲು ಜು. 26ರಂದು ದೇಶದಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ವನ್ನು ಆಚರಿಸಲಾಗುತ್ತದೆ. ಈ ದಿನವು ಸಂಘರ್ಷದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸಾಧಿಸಿದ ವಿಜಯ ಮತ್ತು ಅಪರೇಷನ್ ವಿಜಯ್ ನ ಯಶಸ್ವಿ ಸಮಾಪ್ತಿಗೆ 26ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಸುಮಾರು 60 ದಿನಗಳ ಕಾಲ ನಡೆದ ಕಾರ್ಗಿಲ್ ಯುದ್ಧ ಈ ದಿನದಂದು ಕೊನೆಗೊಂಡಿತು. ಭಾರತೀಯ ರಕ್ಷಣಾ ಪಡೆಗಳು ಪಾಕಿಸ್ತಾನ ಸೈನ್ಯಕ್ಕೆ ಸೂಕ್ತ ಉತ್ತರ
ನೀಡಿ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಭ್ರಮಿಸಿದ ದಿನವಾಗಿದೆ ಎಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳಿಗೆ ಕಾರ್ಗಿಲ್ ನಲ್ಲಿ ಯೋಧರು ಹೋರಾಡಿದ ವೀಡಿಯೋ ದೃಶ್ಯಗಳನ್ನು, ಯೋಧರು ಸಂಭ್ರಮಿಸಿದ ಕ್ಷಣಗಳ ವೀಡಿಯೋಗಳನ್ನು, ಮತ್ತು ದೇಶಭಕ್ತಿಗೀತೆಗಳ ವೀಡಿಯೋಗಳನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾ‌ರ್ ಶೆಟ್ಟಿ, ಪ್ರಾಂಶುಪಾಲ ಹರೀಶ್ ಕೆ.ಆರ್., ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರನ್ನು ಕಾಲೇಜಿನ ಕನ್ನಡ ಉಪನ್ಯಾಸಕ ನೀಲಕಂಠ ಅವರು ಸ್ವಾಗತಿಸಿದರು. ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here