
ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ ಜು. 27ರಂದು ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಕೆ. ಲಲಿತಾ ಕೇದಳಿಕೆ ಅವರ ಮನೆಯಲ್ಲಿ ಜರಗಿತು.
ಕೆನರಾ ಬ್ಯಾಂಕ್ ನ ನಿವೃತ್ತ ಪ್ರಬಂಧಕ ರಾಮಪ್ಪ ಎಸ್. ಪೂಜಾರಿ ಪಣೆಜಾಲು ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕ್ರೀಡಾಕೂಟಕ್ಕೆ ಚಾಲನೆಯನ್ನು ಸುಕನ್ಯಾ ಭಗೀರಥ್ ಗುಂಪೋಳಿ ಅವರು ಚೆನ್ನೆದ ಮನೆ ಆಡುವ ಮೂಲಕ ವಿವಿಧ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶಾಂತಾ ಜೆ. ಬಂಗೇರ ಅವರ ನೇತೃತ್ವದಲ್ಲಿ ಮಕ್ಕಳಿಗೆ ಮಹಿಳೆಯರಿಗೆ ಮಹನೀಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಅಧ್ಯಕ್ಷ ನಾಗೇಶ್ ಅದೇಲು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು ಮಾತನಾಡಿ ನಾವೆಲ್ಲರೂ ಹಿರಿಯರು ತೋರಿಸಿ ಕೊಟ್ಟ ಸಂಸ್ಕ್ರತಿ ಆಚಾರ ವಿಚಾರಗಳೊoದಿಗೆ ಮುನ್ನಡೆಯಬೇಕು ಎಂದರು.

ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್ ಆಟಿದ ಕೂಟ ಆಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಪದ್ಮನಾಭ ಸಾಲಿಯನ್ ಮಾಲಾಡಿ ಆಗಮಿಸಿದ್ದರು. ವೇದಿಕೆಯಲ್ಲಿ ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಕೆ. ಲಲಿತಾ ಕೇದಳಿಕೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬಂಗೇರ ಉಪಸ್ಥಿತರಿದ್ದರು.
ವಿಶೇಷ ಆಹ್ವಾನಿತರಾಗಿ ಪಾರೆಂಕಿ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ, ಗೌರವಾಧ್ಯಕ್ಷ ಯೋಗಿಶ್ ಪೂಜಾರಿ ಕಡ್ತಿಲ, ಪ್ರಧಾನ ಕಾರ್ಯದರ್ಶಿ ಶುಭಾಶ್ ಪೂಜಾರಿ ಹಾರಬೆ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ತರುಷ್ ಜೆ. ಬಂಗೇರ, ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾಂಭವಿ ಪಿ. ಬoಗೇರ ಆಗಮಿಸಿದ್ದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಅತಿಥಿಗಳು ಬಹುಮಾನ ನೀಡಿದರು.

ಆಟಿ ತಿಂಗಳ ವಿಶೇಷವಾದ ಸುಮಾರು 45 ಮನೆಗಳಿಂದ ತಯಾರಿಸಿದ ತುಳು ನಾಡ ಪರಂಪರೆಯ ತಿಂಡಿ ತಿನಸುಗಳೊಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು ಸದಸ್ಯರು ಹಾಗೂ ಗೌರವ ಸಲಹೆಗಾರರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಪ್ರೀತಿಕಾ ಪ್ರಾರ್ಥಿಸಿದರು. ಅನೂಪ್ ಬಂಗೇರ ಸ್ವಾಗತಿಸಿದರು. ಆನಂದ ಕೋಟ್ಯಾನ್ ಮತ್ತು ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಸಮಿತಿಯ ಗೌರವಾಧ್ಯಕ್ಷ ಚoದ್ರಶೇಖರ್ ಕೋಟ್ಯಾನ್ ಧನ್ಯವಾದ ನೀಡಿದರು.
… ವರದಿ ಮನು ಮದ್ದಡ್ಕ