Site icon Suddi Belthangady

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಾದಕ ವಸ್ತು ದುರುಪಯೋಗ ತಡೆಗಟ್ಟುವಿಕೆ ಕುರಿತು ಮಾಹಿತಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 28ರಂದು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಕಾರ್ಯಕ್ರಮ ಉದ್ಘಾಟಿಸಿ ಮಾದಕ ವಸ್ತುಗಳ ಬಳಕೆಯಿಂದ ಶರೀರ, ಆರೋಗ್ಯದ ಮೇಲೆ ಉಂಟಾಗುವ ಸಮಸ್ಯೆ ಕುರಿತು ಮಾಹಿತಿ ನೀಡಿದರು. ಪುನರ್ವಸತಿ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು. ಕಾನ್ಸ್ಟೇಬಲ್ ಪ್ರಶಾಂತ ಉಪಸ್ಥಿತರಿದ್ದರು.

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಮನಶಾಸ್ತ್ರ ವಿಭಾಗದ ಉಪನ್ಯಾಸಕಿ ಶಾಮಿಲಾ ಮಾದಕ ವ್ಯಸನಿಗಳನ್ನು ಆಪ್ತ ಸಮಾಲೋಚನೆ ಮೂಲಕ ವ್ಯಸನ ಮುಕ್ತಗೊಳಿಸಬಹುದಾದ ಬಗ್ಗೆ ಕುರಿತು ವಿವರಿಸಿದರು.

ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಕಾವ್ಯ ಸ್ವಾಗತಿಸಿ, ಜ್ಯೋತಿಯವರು ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ವಂದಿಸಿದರು.

Exit mobile version