
ಉಜಿರೆ :ಜು28. ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು.
ಶಾಲಾ ವಿದ್ಯಾರ್ಥಿಗಳಿಂದ ದೇಶ ಭಕ್ತಿಗೀತೆ ಗುಂಪು ಗಾಯನ, ಏಳನೇ ತರಗತಿ ವಿದ್ಯಾರ್ಥಿಗಳಿಂದ ಕಾರ್ಗಿಲ್ ವಿಜಯ ದಿನದ ಮಾದರಿ ತಯಾರಿಸಿ ಪ್ರದರ್ಶನ ಹಾಗೂ ವಿದ್ಯಾರ್ಥಿನಿ ಗ್ರೀಷ್ಮ ಕಾರ್ಗಿಲ್ ವಿಜಯ ದಿವಸದ ಮಹತ್ವ ತಿಳಿಸಿದರು.
ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ನಿಶಾ ನಿರೂಪಿಸಿದರು.