ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು. 27ರಂದು ಮದ್ದಡ್ಕ ಬಂಡಿ ಮಠ ಮೈದಾನದ ವೆಲ್ಕಮ್ ಯೂತ್ ಕ್ಲಬ್ ಬಯಲು ರಂಗ ಮಂದಿರದಲ್ಲಿ ಸಮಿತಿ ಅಧ್ಯಕ್ಷ ಗೋಪಿನಾಥ್ ನಾಯಕ್ ಗುರುವಾಯನಕೆರೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಆಮಂತ್ರಣ ಪತ್ರಿಕೆಯನ್ನು ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ, ಹಿರಿಯರಾದ ಬಾಲಕೃಷ್ಣ ಶೆಣೈ ಮದ್ದಡ್ಕ ಅವರು ಬಿಡುಗಡೆಗೊಳಿಸಿದರು. ಗಣೇಶೋತ್ಸವದ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು. ಸಮಿತಿಯ ಪದಾಧಿಕಾರಿಗಳು, ಉಪ ಸಮಿತಿಗಳ ಸoಚಾಲಕರು ಸರ್ವ ಸದಸ್ಯರು ಉಪಸ್ಥಿತರಿದ್ದರು.