
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣ ಹೂತಿದ್ದೇನೆಂದ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಎಸ್.ಐ.ಟಿ ಕಚೇರಿಗೆ ಮಾಸ್ಕ್ ಮ್ಯಾನ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಎಸಿ
ಭೇಟಿ ನೀಡಿದ್ದಾರೆ.
ಅನಾಮಿಕ ವ್ಯಕ್ತಿಯನ್ನು ಇಂದು ಕೂಡ ಧರ್ಮಸ್ಥಳ ಸಮಾಧಿ ಸ್ಥಳಕ್ಕೆ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆದುಕೊಂಡು ಹೋಗಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯ ನಡೆಯಲಿದೆ.