
ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳಾಲು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆಯುವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜು. 30ರಂದು ಬೆಳಾಲು ಶ್ರೀ ಧ. ಮ. ಪ್ರೌಢ ಶಾಲೆಯಲ್ಲಿ ನಡೆಯಿತು.
ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಶ್ರೀ ಧ. ಮಂ. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ ಮಯ್ಯ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಶಿವಕುಮಾರ ಬಾರಿತ್ತಾಯ, ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಕಾರ್ಯದರ್ಶಿ ಹರೀಶ್ ಆಚಾರ್ಯ, ಕೋಶಾಧಿಕಾರಿ ದಿವಾಕರ ಆಚಾರ್ಯ, ಸಂಚಾಲಕ ಸತೀಶ್ ಗೌಡ ಎಳ್ಳುಗದ್ದೆ, ಉಪಾಧ್ಯಕ್ಷರು ರತ್ನಾಕರ ಆಚಾರ್ಯ, ಗಂಗಾಧರ ಸಾಲಿಯಾನ್, ಜತೆ ಕಾರ್ಯದರ್ಶಿಗಳು ಮತ್ತು ಸೇವಾ ಪ್ರತಿನಿಧಿಗಳು ತಾರಾನಾಥ ಗೌಡ, ಪ್ರಮೀಳಾ, ಪ್ರಭಾವತಿ, ಚೈತನ್ಯ, ಶೌರ್ಯ ವಿಪತ್ತು ಘಟಕದ ಸಂತೋಷ ಕುದ್ದ0ಟೆ ಮೊದಲಾದವರು ಉಪಸ್ಥಿತರಿದ್ದರು.