
ನಡ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆ.1ರಂದು ನಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಗ್ರಾಮ ಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಜಯ ಶೆಟ್ಟಿ, ಪಂಚಾಯತ್ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ. ಸ್ವಾಗತಿಸಿ, ಕಾರ್ಯದರ್ಶಿ ಕಿರಣ್ ಎಂ. ಅನುಪಾಲನಾ ವರದಿ ಮಂಡಿಸಿದರು.