
ಬೆಳ್ತಂಗಡಿ: ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಬೆಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ ಹಾಗೂ ಗ್ರಾಮ ಮಟ್ಟದ ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಸಹಯೋಗದೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಮಟ್ಟದ ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಸದಸ್ಯರಿಗೆ ಹಾಗೂ ಇಲಾಖಾಧಿಕಾರಿಗಳಿಗೆ ಜೀವ ವೈವಿಧ್ಯ ಕಾಯಿದೆಯ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಉಪನಿರ್ದೇಶಕ ಪವಿತ್ರ ಮತ್ತು ತಾಂತ್ರಿಕ ಕಾರ್ಯನಿರ್ವಾಹಕ ಪ್ರಸನ್ನ ಕೆ.ಆರ್. aವರು ಜೀವ ವೈವಿಧ್ಯ ಕಾಯಿದೆಯ ಕುರಿತು ಮಾಹಿತಿಯನ್ನು ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.