ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಮಾಧ್ಯದವರು ಕೇಳಿದ ಪ್ರಶ್ನೆಗೆ, ಪ್ರಕರಣ ಕುರಿತಾಗಿ ಯಾರಾದರೂ ದ್ವೇಷದ ಪೋಸ್ಟ್ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು.
ಸುಳ್ಳು ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಸರಕಾರ ಈಗ ಮುಂದಾಗಿದ್ದು ವಿಧಾನಸೌಧದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಈಗ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದಾರೆ.