
ಧರ್ಮಸ್ಥಳ: ಹೆಣ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.2ರಂದು 6ನೇ ದಿನದ ಉತ್ಖನನ ಕಾರ್ಯಾಚರಣೆ ನಡೆಸಲಿದ್ದಾರೆ.
ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಲಿದ್ದಾರೆ. ಇಂದು ಮತ್ತೆ ಕಾರ್ಮಿಕರು ಮತ್ತು ಸಣ್ಣ ಜೆಸಿಬಿ ಯಂತ್ರದ ಮೂಲಕ ಕಾರ್ಯಚರಣೆ ನಡೆಯಲಿದೆ. ಹಾಗೂ ಸ್ಥಳದಲ್ಲಿ ಎರಡು ಕ್ಯಾಮೆರಾಗಳಲ್ಲಿ ಸ್ಥಳದ ಸಂಪೂರ್ಣ ಚಿತ್ರಣವನ್ನು ಅಧಿಕಾರಿಗಳು ಸೆರೆಹಿಡಿಯಲಾಗುತ್ತದೆ. ಅನಾಮಿಕ ವ್ಯಕ್ತಿಯನ್ನು ಧರ್ಮಸ್ಥಳ ಸಮಾಧಿ ಸ್ಥಳಕ್ಕೆ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆದುಕೊಂಡು ಹೋಗಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯ ನಡೆಯಲಿದೆ.