ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಬೆಳ್ತಂಗಡಿ ಯಕ್ಷ ಸಂಭ್ರಮ ಮತ್ತು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ನೇತೃತ್ವದಲ್ಲಿ ಉಜಿರೆ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಂಗಣದಲ್ಲಿ ಮಹಿಳಾ ಯಕ್ಷ ಸಂಭ್ರಮ ಆ.2ರಂದು ಉದ್ಘಾಟನೆಗೊಂಡಿತು.
ಬೆಳಿಗ್ಗೆ 10ರಿಂದ ಪ್ರಾರಂಭವಾದ ಚೌಕಿ ಪೂಜೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಬಳಿಕ ಮಂಗಳೂರು ಮಹಾದೇವ ಯಕ್ಷ ಕಲಾ ತಂಡ ದಿಂದ ಪೂರ್ವರಂಗ, ಯಕ್ಷ ಕಲಾ ಸಂಗಮದಿಂದ ಅಬ್ಬರದ ಚೆಂಡೆ ನಡೆಯಿತು.
ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ ದೀಪ ಪ್ರಜ್ವಲನೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರರು ಯು. ಶರತ್ ಕೃಷ್ಣ ಪಡ್ಡೆಟ್ನಾಯ ನೆರವೇರಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಯಕ್ಷಗಾನ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ. ನಾಗೇಶ್ ಕುಮಾರ್ ಗೌಡ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಮಿತಾ,ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟರ್ ನಮ್ರತಾ ಎನ್., ಉಜಿರೆ ಸಹಕಾರ ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ, ಉದ್ಯಮಿ ಮೋಹನ ಶೆಟ್ಟಿಗಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ರಾಘವ ಹೆಚ್. ರಾಜೇಶ್ ಕುಳಾಯಿ, ಗುರುರಾಜ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ. ಬೆಳಾಲು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು. ನಂತರ ಬಡಗುತಿಟ್ಟು ಯಕ್ಷಗಾನ ಲವ ಕುಶ,- ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ನರಕಾಸುರ – ಗರುಡ ಗರ್ವ ಭಂಗ ನಡೆಯಿತು.