Site icon Suddi Belthangady

ಕಕ್ಯಪದವು: ಎಲ್.ಸಿ.ಆರ್. ವಿದ್ಯಾಸಂಸ್ಥೆ ಪದವಿ ವಿಭಾಗದ 2025-2026ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ

ಕಕ್ಯಪದವು: ಎಲ್. ಸಿ‍. ಆರ್ ಇಂಡಿಯನ್‍ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಆ. 2ರಂದು ಬೆಳಿಗ್ಗೆ 11ಗಂಟೆಗೆ ನಡೆಸಲಾಯಿತು. ವಿದ್ಯಾರ್ಥಿಗಳು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಚಲಾಯಿಸಲು ಮತ್ತು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶವನ್ನು ಒದಗಿಸಿತು.

ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ್ ಜಿ. ನಾಯಕ್ ಮತ್ತು ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತ ಅವರ ಮೇಲ್ವಿಚಾರಣೆಯಲ್ಲಿ ಚುನಾವಣಾ ಪ್ರಕ್ರೀಯೆಯನ್ನು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಯಿತು. ಚುನಾವಣೆಯನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿ ವಿದ್ಯಾರ್ಥಿ ಸಮುದಾಯವು ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸಲಾಯಿತು. ಗಮನಾರ್ಹ ಸಂಖ್ಯೆಯ ವಿದ್ಯಾರ್ಥಿಗಳು ತಮ್ಮ ಮತಗಳನ್ನು ಚಲಾಯಿಸಿದರು.

ಮತದಾನ ಪ್ರಕ್ರಿಯೆ ಮುಗಿದ ಸ್ವಲ್ಪ ಸಮಯದ ನಂತರ ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಯಿತು. ವಿದ್ಯಾರ್ಥಿ ಸಂಘದ ನಾಯಕಿಯಾಗಿ ಸುಪ್ರಿಯಾ ಮತ್ತು ವಿದ್ಯಾರ್ಥಿ ಸಂಘದ ಉಪ ನಾಯಕನಾಗಿ ದೀಕ್ಷಿತ್ ಕೆ. ಅವರು ಆಯ್ಕೆಯಾಗಿರುತ್ತಾರೆ.

Exit mobile version