Site icon Suddi Belthangady

ಯುವ ವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

ಬೆಳ್ತಂಗಡಿ: ಘಟಕದ ಆಶ್ರಯದಲ್ಲಿ,ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆತಿಥ್ಯದಲ್ಲಿ ಆ. 2ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ಆಟಿದ ಕಮ್ಮೆನ ಕಾರ್ಯಕ್ರಮ ನಡೆಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಸಲಹೆಗಾರರಾದ ಸುಧಾಮಣಿ ಆ‌ರ್. ಆಟಿ ತಿಂಗಳ ವಿಶೇಷದ ಬಗ್ಗೆ ಮಾತನಾಡಿದರು.ಕು. ಶೃತಾ ಮುಂಡೂರು ವಿವಿಧ ಗಾದೆ ಮಾತುಗಳನ್ನು ತಿಳಿಸಿದರು.

ಯುವವಾಹಿನಿ ಬೆಳ್ತಂಗಡಿ ಘಟಕದ ಕಾರ್ಯದರ್ಶಿ ಮಧುರ ರಾಘವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು ಪದಾಧಿಕಾರಿಗಳು,ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಸದಸ್ಯರು ತಯಾರಿಸಿ ತಂದಿರುವ ವಿವಿಧ ಬಗೆಯ ಆಟಿ ಖಾದ್ಯದೊಂದಿಗೆ ಸಹ ಭೋಜನ ನಡೆಯಿತು. ಜೀತೇಶ್ ಮತ್ತು ಬಳಗದವರು ನೃತ್ಯ ನಡೆಸಿದರು.

ಕಾರ್ಯಕ್ರಮದ ಸಂಯೋಜಕ ಅಶೋಕ ಕಲ್ಮಂಜ ಸ್ವಾಗತಿಸಿದರು. ಶ್ವೇತಾ ಯುವರಾಜ್ ಕಾರ್ಯಕ್ರಮ ನಿರೂಪಿಸಿದರು. ಯುವವಾಹಿನಿ ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕಿ ಲೀಲಾವತಿ ಪಣಕಜೆ ವಂದಿಸಿದರು.

Exit mobile version