


ಲಾಯಿಲ: ಕರ್ನೋಡಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ 1ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ತಾಲೂಕಿನ ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.


ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಆರ್., ಉಪಾಧ್ಯಕ್ಷ ಅನಿಲ್ ಕಕ್ಕೇನ, ಸದಸ್ಯರಾದ ಪವನ್ ಗಾಂಧಿನಗರ, ರಮ್ಯಾ ಪುತ್ರಬೈಲ್, ಮುಷ್ತಾಕ್ ಕಾಶಿಬೆಟ್ಟು, ಅಶ್ರಫ್ ಮಾಂಜಾಲ್, ಎಸ್.ಡಿ.ಎಂ.ಸಿ ಸದಸ್ಯರಾದ ಚಂದ್ರಾವತಿ, ಸಮಿಯಾ, ತಸ್ರಿಫಾ ಉಪಸ್ಥಿತರಿದ್ದರು.









