
ತಣ್ಣೀರುಪಂತ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ. 2ರಂದು ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು.
ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷ, ಪ್ರಶಿಕ್ಷಣ್ ಪ್ರಮುಖ್ ಕೊರಗಪ್ಪ ಗೌಡ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.