Site icon Suddi Belthangady

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ 2025-26ನೇ ಸಾಲಿನ ಪೂರ್ವ ಪ್ರಾಥಮಿಕ, ಪ್ರಾಥಮಿಕ ಪ್ರೌಢ ಶಾಲಾ, ಕಾಲೇಜಿನ ಶಿಕ್ಷಕ ಶಿಕ್ಷಕ ರಕ್ಷಕ ಸಂಘದ ಸಭೆಯು ಜು. 2ರಂದು ನಡೆಯಿತು.

ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಗೋಪಾಲ ಶೆಟ್ಟಿ ಅವರು ಆಯ್ಕೆಯಾದರು. ಶಾಲಾ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಅವರು ಆಯ್ಕೆಗೊಂಡರು. ಅದೇ ರೀತಿ ಉಪಾಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಲಾಯಿತು. ಶಾಲಾ ವಿದ್ಯಾರ್ಥಿ ಗಳಿಗೆ ಪೀಠೋಪಕರಣ ನೀಡಿ ಸಹಕರಿಸಿದ ಚಂದ್ರಶೇಖರ ಅವರನ್ನು ಗೌರವಿಸಲಾಯಿತು.

ರಷ್ಯಾದಲ್ಲಿ ಎಂ.ಬಿ.ಬಿ.ಎಸ್ ಮಾಡುತ್ತಿರುವ ಹಳೆ ವಿದ್ಯಾರ್ಥಿ ಪೂಜಿತ್ ಕುಲಾಲ್ ಅವರು ಮಕ್ಕಳಿಗೆ ಮೊಬೈಲ್ ನೀಡದೆ ಅವರ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅವಕಾಶ ಮಾಡಿ ಕೊಡಿ ಎಂದು ಪೋಷಕರಿಗೆ ಕಿವಿ ಮಾತು ನೀಡಿದರು. ಅದೇ ರೀತಿ ಈ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ನಮ್ಮ ಶಾಲಾ ಸಂಸ್ಥಾಪಕ ಗಿರೀಶ್ ಕೆ.ಹೆಚ್. ಅವರು ಕುಂಭಶ್ರೀಯು ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರ ಸಹಕಾರವೇ ಕಾರಣ ಎಂದರು.

ಕಾಲೇಜಿನ ಪ್ರಾಂಶುಪಾಲ ಓಮನ, ಮಾಜಿ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ಸುಜಾತ, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಶುಭ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್.ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಶಿಕ್ಷಕಿ ಅಕ್ಷತ ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಶಿಕ್ಷಕಿ ಭವಾನಿ, ದಿವ್ಯ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕ ಸುಮನ್ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ವೇತ ಬಿ. ವಂದಿಸಿದರು.

Exit mobile version