ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ(Department of Computer Science) ಮತ್ತು SDM-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “ವ್ಯವಹಾರ ಆಡಳಿತ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ಮತ್ತು ವೈಜ್ಞಾನಿಕ ಆವಿಷ್ಕಾರಗಳು (Scientific Innovations) ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತು.
ಈ ಕಾರ್ಯಕ್ರಮ ಆ. 4ರಂದು ತೃತೀಯ ಬಿ.ಸಿ.ಎ., ಬಿ.ಬಿ.ಎ. ಮತ್ತು ಬಿ.ಕಾಂ. ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 375 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು. ಬೆಂಗಳೂರಿನ ಅಲ್ಲೈನ್ಸ್ ವಿಶ್ವವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಪ್ರಾದ್ಯಾಪಕ ಡಾ. ನಾಗರಾಜ ಎಸ್. ಅವರು ಸಂಪನ್ಯೂಲ ವ್ಯೆಕ್ತಿಗಳಾಗಿ ಭಾಗವಹಿಸಿದ್ದರು. ಮತ್ತು ಅವರು ಕೃತಕ ಬುದ್ಧಿಮತ್ತೆ (Artificial Intelligence) ಮತ್ತು ವೈಜ್ಞಾನಿಕ ಆವಿಷ್ಕಾರಗಳು (Scientific Innovations) ತಾಂತ್ರಿಕ ಪ್ರಗತಿಯ ಹೊಸ ಯುಗವನ್ನು ನಿರೂಪಿಸುತ್ತಿದ್ದು, ಇವುಗಳನ್ನು ಆಧರಿಸಿದ ಭವಿಷ್ಯದ ಅವಕಾಶಗಳು ಉದ್ಯೋಗ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಹಾಗೂ ಪರಿಸರದ ಕ್ಷೇತ್ರಗಳಲ್ಲಿ ಅಪಾರವಾಗಿವೆ.
ಹೊಸತನ, ಸಂಶೋಧನೆ ಮತ್ತು ಡಿಜಿಟಲ್ ರೂಪಾಂತರಗಳ ಮೂಲಕ ಇವು ಮಾನವ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ರವರು ವಹಿಸಿದ್ದರು. ಕೃತಕ ಬುದ್ಧಿಮತ್ತೆ ಹಾಗೂ ವೈಜ್ಞಾನಿಕ ಆವಿಷ್ಕಾರಗಳು ಕೌಶಲ್ಯ ಪರಿವರ್ತನೆಗೆ ಕಾರಣವಾಗುತ್ತವೆ ಎಂಬ ಅರಿವು ಮೂಡಿಸಿದರು.
ಕೃತಕ ಬುದ್ಧಿಮತ್ತೆ ಹಾಗೂ ವೈಜ್ಞಾನಿಕ ಆವಿಷ್ಕಾರಗಳು ಕೌಶಲ್ಯದ ಪರಿವರ್ತನೆಗೆ ಪ್ರಮುಖ ಕಾರಣಗಳಾಗಿವೆ. ಆಧುನಿಕ ಉದ್ಯೋಗ ಕ್ಷೇತ್ರದಲ್ಲಿ ಕೌಶಲ್ಯ ಪರಿವರ್ತನೆಯ ಮೂಲ ಚಾಲಕಶಕ್ತಿಗಳಾಗಿವೆ ಮತ್ತು ಇದರ ಪ್ರಭಾವದಿಂದ ಕೌಶಲ್ಯಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗುತ್ತಿವೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದಲ್ಲಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಶೈಲೇಶ್ ಕುಮಾರ ಅವರು ಉಪಸ್ಥಿತರಿದ್ದರು. ಎಸ್.ಡಿ.ಎಮ್.-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರ ನಿರ್ದೇಶಕ ಡಾ. ನಾಗರಾಜ ಪೂಜಾರಿ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಮತ್ತು ವೃತ್ತಿ ಮಾರ್ಗದರ್ಶನ ಕೇಂದ್ರದ ಸದಸ್ಯ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದ ಉಪನ್ಯಾಸಕ ದೀಕ್ಷಿತ್ ರೈ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.