
ಬೆಳ್ತಂಗಡಿ: ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರ ಮುಷ್ಕರ ಹೊರತಾಗಿಯೂ, ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಕೆ.ಎಸ್.ಆರ್.ಟಿ.ಸಿ ವಾಹನ ಸಂಚಾರ ಎಂದಿನಂತೆ ಸುಗಮವಾಗಿದೆ. ಮುಷ್ಕರದ ಪರಿಣಾಮ ಸಾರ್ವಜನಿಕರ ಮೇಲೆ ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲ.
ಧರ್ಮಸ್ಥಳ, ಮಂಗಳೂರು ಮತ್ತು ಇತರ ಪ್ರಮುಖ ಸ್ಥಳ, ಗ್ರಾಮೀಣ ಭಾಗ ಸಂಚರಿಸುವ ಸರಕಾರಿ ಬಸ್‌ಗಳು ಎಂದಿನಂತೆ ರಸ್ತೆಗಿಳಿದಿವೆ. ಇದರಿಂದ ಪ್ರಯಾಣಿಕರು ತಮ್ಮ ನಿತ್ಯದ ಕೆಲಸ ಕಾರ್ಯಗಳಿಗೆ ಯಾವುದೇ ಅಡಚಣೆಯಿಲ್ಲದೆ ತೆರಳುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಸಾಮಾನ್ಯ ಸ್ಥಿತಿಯಲ್ಲಿರುವುದರಿಂದ, ಮುಷ್ಕರದ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತಲಿನ ಗ್ರಾಮೀಣ ಜನರನ್ನು ತಟ್ಟಿಲ್ಲ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿಲಾಗಿದೆ.