Site icon Suddi Belthangady

ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಅಂಡರ್ 14 ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟವು ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ. 4ರಂದು ನಡೆಯಿತು.

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ತ್ರಿಶಾ ಗೋವಿಯಸ್ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ, ತ್ರಿಶಾ ಗೋವಿಯಸ್ ಹಾಗೂ ಸುಭೀಕ್ಷಾ ಜೋಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೈಷ್ಣವಿ ರೈ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸಂದೀಪ್ ಕುಮಾರ್ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಫಾ. ಕ್ಲಿಫರ್ಡ್ ಪಿಂಟೋ ಶುಭ ಹಾರೈಸಿದರು.

Exit mobile version