ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಆ.5ರಂದು 11ನೇ ಗುರುತಿನ ಉತ್ಖನನದಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿತ್ತು. ಮಧ್ಯಾಹ್ನದ ನಂತರ 12ನೇ ಗುರುತಿನ ಕಾರ್ಯಾಚರಣೆಗೆ ನಡೆಸಿ, ಉತ್ಖನನದಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. 8ನೇ ದಿನದ ಕಾರ್ಯಾಚರಣೆ ಅಂತ್ಯಗೊಂಡಿತ್ತು.
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣ: 12ನೇ ಗುರುತಿನ ಉತ್ಖನನದಲ್ಲಿ ಪತ್ತೆಯಾಗದ ಕಳೇಬರ- ಕಾರ್ಯಾಚರಣೆ ಅಂತ್ಯ
