
ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.5ರಂದು ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಸಂಗೀತ ಭಾರತೀ ಇದರ ಉದ್ಘಾಟನಾ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ದರ್ಶಕ ಮಾಯಿಲ್ತೊಡಿ ಈಶ್ವರ ಭಟ್ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ವರ್ಣ ಎನ್. ಭಟ್, ಗಾನ ಭಾರತೀ ಇಳಂತಿಲ ಅವರು ದೀಪೊಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ವೇದಿಕೆಯಲ್ಲಿ ಸಂಗೀತ ಶಿಕ್ಷಕಿ ಅನುಷಾ, ಸೇವಾ ಸಮಿತಿಯ ಅಧ್ಯಕ್ಷೆ ಚಂದ್ರಿಕಾ ಭಟ್ ಹಾಗೂ ಸೇವಾ ಸಮಿತಿಯ ಸದಸ್ಯರು, PTA ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ.ಆರ್. ಅವರು ಅತಿಥಿಗಳನ್ನು ಸ್ವಾಗತಿಸಿದರು. ಸಹ ಶಿಕ್ಷಕಿ ದಿವ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕ ಮಂಜು ಗಣೇಶ್ ಅವರು ಧನ್ಯವಾದವಿತ್ತರು.