
ಉಜಿರೆ: ಆ.5ರಂದು ರಾತ್ರಿ ಬೆಳ್ತಂಗಡಿ, ಉಜಿರೆ ರಾಷ್ಟ್ರೀಯ ಹೆದ್ದಾರಿಯ ಟಿಬಿ ಕ್ರಾಸ್ ಸಮೀಪ ಲಾರಿ ರಸ್ತೆ ಮಧ್ಯದಲ್ಲಿ ಕೆಟ್ಟು ನಿಂತ ಘಟನೆ ನಡೆದಿದೆ.
ಜೋರಾಗಿ ಮಳೆ ಸುರಿಯುತ್ತಿದ್ದ ಕಾರಣ ಉಜಿರೆಯಿಂದ ಟಿಬಿ ಕ್ರಾಸ್ ವರೆಗೆ ಅರ್ಧ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾದ ಸ್ಥಳದಲ್ಲಿ ಆಂಬುಲೆನ್ಸ್ ಪರದಾಡುವಂತಾಯಿತು. ತಕ್ಷಣ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರೇನ್ ಸಹಾಯದಿಂದ ಲಾರಿಯನ್ನು ಬದಿಗೆ ನಿಲ್ಲಿಸಿ ಸಮಸ್ಯೆಯನ್ನು ಬಗೆಹರಿಸಿದರು.