




ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ.


ಆದ್ಯಾ ರೈ, ವರ್ಷ, ಸಿಯಾ, ದೃಶಾ ಮರಿಯಾ, ಯಜ್ಞ ರೈ ಇವರನ್ನುೊಳಗೊಂಡ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಪ್ರೌಢಶಾಲಾ ವಿಭಾಗದಲ್ಲಿ ಆದ್ಯ ರೈ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದಿರುತ್ತಾರೆ.
ಸನ್ನಿಧಿ ಮತ್ತು ಶ್ರಾವಣಿ ಇವರನ್ನೊಳಗೊಂಡ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಗಳಿಸುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸನ್ನಿಧಿ ಅವರು ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ದೈಹಿಕ ಶಿಕ್ಷಕ ಸಂತೋಷ್ ಅವರು ತರಬೇತಿಯನ್ನು ನೀಡಿರುತ್ತಾರೆ.









