
ಸುಲ್ಕೇರಿ: ಬಂಟರ ಯಾನೆ ನಾಡವರ ಸಂಘದ ಸುಲ್ಕೇರಿ ಬಂಟರ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಮಹಮ್ಮಾಯಿ ದೇವಸ್ಥಾನದ ವಠಾರದಲ್ಲಿ ಆ.3ರಂದು ನಡೆಯಿತು.
ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಸುಲ್ಕೇರಿ ಗ್ರಾಮ ಸಮಿತಿಯ ಗೌರವಾಧ್ಯಕ್ಷ ರಾಮ ಶೆಟಟ್ಟಿ, ರಾಜು ಶೆಟ್ಟಿ ಕೊಕ್ರಾಡಿ, ಹಾಗೂ ಬೇಬಿ ಶೆಟ್ಟಿ ಅವರಿಂದ ಉದ್ಘಾಟನೆಗೊಂಡಿತು.
ಸುಲ್ಕೇರಿ ಬಂಟ ಸಮಾಜದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕೂಟದ ಸಮಾರೋಪ ಸಮಾರಂಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದು, ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ, ಉಪಾಧ್ಯಕ್ಷ ನವೀನ್ ಸಾಮಾನಿ, ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ, ತಾಲೂಕು ಯುವ ಬಂಟರ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ನಾರಾವಿ ಬಂಟರ ವಲಯಾಧ್ಯಕ್ಷ ರಾಜೇಶ್ ಶೆಟ್ಟಿ ಪೆರಾಡಿ ಉಪಸ್ಥಿತರಿದ್ದರು.
ನಿರ್ದೇಶಕ ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮದಲ್ಲಿ ಆಟಿಡೊಂಜಿ ದಿನ ವಿಶೇಷತೆಯನ್ನು ಹೇಳಿದರು.
ಈ ಸಮಾರಂಭದಲ್ಲಿ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ ಅಂಕ ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರೀತಿ ಶೆಟ್ಟಿ ಪ್ರಾರ್ಥನೆ ಮಾಡಿದರು. ರವಿ ಶೆಟ್ಟಿ ಸ್ವಾಗತಿಸಿದರು. ಸ್ವಾತಿ ಶೆಟ್ಟಿ ವರದಿ ವಾಚನ, ವಿಶ್ವನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದಯಾಕರ ರೈ ವಂದಿಸಿದರು.