
ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ರಾಜ್ಯಮಟ್ಟದ ಆಂಚೆ-ಕುಂಚ ವಿಜೇತರಿಗೆ ಪುರಸ್ಕಾರ ಡಿ.ವೀರೇಂದ್ರ ಹೆಗ್ಗಡೆ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಆ.19ರಂದು ಬೆಳಗ್ಗೆ 11ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ 31ನೇ ವರ್ಷದ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ 22ನೇ ವರ್ಷದ ಪ್ರದಾನ ಸಮಾರಂಭ ನಡೆಯಲಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಜ್ಞಾನ ಪಥ ಹಾಗೂ ಜ್ಞಾನ ರಥ ಪುಸ್ತಕಗಳು ಬಿಡುಗಡೆಗೊಳ್ಳಲಿವೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಶಾಂತಿವನ ಟ್ರಸ್ಟ್ ಟ್ರಸ್ಟಿಗಳಾದ ಹೇಮಾವತಿ ವೀ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಉಪಸ್ಥಿತರಿರುವರು, ಚಲನಚಿತ್ರ ಸಾಹಿತಿ, ನಿರ್ದೇಶಕ ಬೆಂಗಳೂರಿನ ಡಾ.ವಿ. ನಾಗೇಂದ್ರ ಪ್ರಸಾದ್ ಕೃತಿ ಬಿಡುಗಡೆಗೊಳಿಸುವರು. ಚಲನಚಿತ್ರ ನಟ ದತ್ತಣ್ಣ ಪುರಸ್ಕಾರ ಪ್ರದಾನ ಮಾಡುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ. ವಿಭಾಗ ಉಪನಿರ್ದೇಶಕ ಗೋವಿಂದ ಮಡಿವಾಳ ಹಾಗೂ ಉಡುಪಿ ವಿಭಾಗ ಉಪನಿರ್ದೇಶಕ ಲೋಕೇಶ್ ಸಿ. ಉಪಸ್ಥಿತರಿರುವರು ಎಂದು ಧರ್ಮಸ್ಥಳ కాంతవన ట్రనా రాయదని ಬಿ.ಸೀತಾರಾಮ ತೋಳ್ತಾಡಿತ್ತಾಯ ಹಾಗೂ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಡಾ.ಎ. ಶಶಿಕಾಂತ ಜೈನ್ ತಿಳಿಸಿದ್ದಾರೆ.