ಈಶ್ವರ ಗೌಡ ಪಿ. ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಈಶ್ವರ ಗೌಡ ಪಿ. ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ. ಡಾ. ಈಶ್ವರ ಗೌಡ ಪಿ. ಅವರು ಬೆಂಗಳೂರು ವಿ.ವಿ .ಪುರಂನ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಈಶ್ವರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Growth and Performance of Regional Rural Banks in Karnataka” ಎಂಬ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.

ಡಾ. ಈಶ್ವರ ಗೌಡ ಪಿ.ರವರು ತಮ್ಮ ಎಂ.ಕಾಂ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, ಎಂ.ಬಿ.ಎ ಪದವಿಯನ್ನು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಮತ್ತು ತಮ್ಮ ಎಂ.ಎ ಪದವಿಯನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಹಾಗೂ ತಮ್ಮ ಎಂ.ಫಿಲ್ ಪದವಿಯನ್ನು ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿರುತ್ತಾರೆ.

ಇವರು ಪುತ್ತೂರಿನ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿ ತದನಂತರ ವರ್ಗಾವಣೆಗೊಂಡು ಮಡಂತ್ಯಾರಿನ ಪ್ರತಿಷ್ಠಿತ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಡಾ. ಈಶ್ವರ ಗೌಡ ಪಿ.ರವರು ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಮಿತ್ತಮೂಲೆ ನಾರಾಯಣ ಗೌಡ ಹಾಗೂ ದಿ. ಮಾನಕ್ಕ ದಂಪತಿಗಳ ಪುತ್ರರಾಗಿದ್ದು, ಪ್ರಸ್ತುತ ಕಡಬ ತಾಲೂಕಿನ ಕುಂತೂರು ಪೆರಾಬೆ ಗ್ರಾಮದ ಶೇಡಿಯ ಶ್ರೀನಿಧಿಯಲ್ಲಿ ಪತ್ನಿ ಶಿಕ್ಷಕಿ ಭುವನೇಶ್ವರಿ ಪಿ.ಎಂ ಹಾಗೂ ಪುತ್ರರಾದ ನಿಧಿಶ್ ಐ.ಬಿ. ಮತ್ತು ಶ್ರೇಯಸ್ ಐ.ಬಿ ಇವರೊಂದಿಗೆ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here