ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಆ.6ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭವಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ಸ್ವಾ| ಸ್ಟ್ಯಾನಿ ಗೋವಿಯಸ್ ಅವರು ವಹಿಸಿದ್ದರು. ಈ ಸಭೆಗೆ ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಕಮ್ಯುನಿಕೇಶನ್ ಸೆಂಟರ್ ಮಂಗಳೂರಿನ ನಿರ್ದೇಶಕ|ಸ್ವಾ| ಅನಿಲ್ ಐವನ್ ಫೆರ್ನಾಂಡಿಸ್ ಅವರು ಆಗಮಿಸಿ ಡಿಜಿಟಲ್ ಯುಗದಲ್ಲಿ ಮಕ್ಕಳ ಸುರಕ್ಷತೆ ಮತ್ತು ಮಾರ್ಗದರ್ಶಿ ಎಂಬ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು.

ಸಹಶಿಕ್ಷಕಿ ಜೋಸ್ವಿಟ ಡಿಸೋಜ ಅವರು ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಸಭೆಗೆ ಮಾಡಿದರು. ಈ ಕಾರ್ಯಕ್ರಮಕ್ಕೆ ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಚೇತನ ಅವರು ಆಗಮಿಸಿ ಮೌಲ್ಯಾಧಾರಿತ ಮೌಲ್ಯಮಾಪನ ಎಂಬ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ಸ್ವಾ|ದೀಪಕ್ ಲಿಯೋ ಡೇಸ ಅವರು ಶಾಲಾ ನಿಯಮಗಳು ಹಾಗೂ ಹೆತ್ತವರ ಸಲಹೆ ಸೂಚನೆಗಳಿಗೆ ಉತ್ತರವನ್ನು ನೀಡಿದರು. ಶಿಕ್ಷಕ-ರಕ್ಷಕ ಸಂಘದ ಎಲ್ಲಾ ಮಾಜಿ ಪದಾಧಿಕಾರಿಗಳಿಗೆ ಗಿಡವನ್ನು ನೀಡುವುದರ ಮೂಲಕ ಧನ್ಯವಾದಗಳನ್ನು ಅರ್ಪಿಸಲಾಯಿತು. 2025-26ನೇ ಶೈಕ್ಷಣಿಕ ಸಾಲಿನ ಪದಾಧಿಕಾರಿಗಳ ಚುನಾವಣೆಯನ್ನು ಮುಖ್ಯೋಪಾಧ್ಯಾಯ ಸ್ವಾ|ದೀಪಕ್ ಲಿಯೋ ಡೇಸ ಅವರು ನೆರವೇರಿಸಿ ನಂತರ ದೀಪ ಬೆಳಗಿಸುವುದರ ಮೂಲಕ 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘವನ್ನು ಉದ್ಘಾಟಿಸಲಾಯಿತು. ಮಾಜಿ ಉಪಾಧ್ಯಕ್ಷ ವಿನಯ್ ಡಿಸೋಜ ಅವರು ಮಾತನಾಡಿ ನಾವು ಪೋಷಕರಾದವರು ತಮ್ಮ ಮಕ್ಕಳಿಗೆ ನಮ್ಮ ಶಾಲೆ ಮತ್ತು ಶಿಕ್ಷಕರ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದು ಹೇಳಿದರು.

ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ರವಿಂದ್ರ ರೈ ಅವರು ಮಾತನಾಡಿ ಶಾಲೆಯ ಏಳಿಗೆಗೆ ಶ್ರಮಿಸುವುದಾಗಿ ಭರವಸೆಯನ್ನಿತ್ತರು. ನೂತನವಾಗಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೆ ಹೂವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು. ಶಾಲಾ ಸಹಶಿಕ್ಷಕಿಯ ರಮ್ಯಾಲತಾ ಮತ್ತು ಸವಿತಾ ಅವರು 2024-25ನೇ ಶೈಕ್ಷಣಿಕ ವರ್ಷದ ಸಭೆಯ ವರದಿಯನ್ನು ಮಂಡಿಸಿದರು. ಸಹ ಶಿಕ್ಷಕಿ ಐಡಾ ಡಿಕುನ್ಹಾ ರವರು 2024-25ನೇ ಶೈಕ್ಷಣಿಕ ಸಾಲಿನ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಸಹ ಶಿಕ್ಷಕಿ ವಿನ್ನಿ ಲೋಬೋ ಮತ್ತು ಮೇಘಶ್ರೀ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಮಲ್ಲಿಕಾ ಅವರು ಸ್ವಾಗತಿಸಿ, ಸೌಮ್ಯಾ ಅವರು ಧನ್ಯವಾದವನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here