
ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಆ.5 ಮತ್ತು 6ರಂದು ನಡೆದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿತ್ತು.
ಸೆಮಿ ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ತಂಡವನ್ನು 3-0 ನೇರಸಟ್ಟುಗಳಿಂದ ಮಣಿಸಿ ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3-0 ಸೆಟ್ ಗಳಿಂದ ಮಣಿಸಿ ಚಾಂಪಿಯನ್ನಾಗಿ ಮೂಡಿ ಬಂದಿತ್ತು, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿದರು.