ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27 ನೇ ವರ್ಷದ ಭಜನಾ ತರಬೇತಿ ಕಮ್ಮಟವು ಸೆಪ್ಟೆಂಬರ್ 14 ರಿಂದ 21 ರವರೆಗೆ ನಡೆಯಲಿದ್ದು ಇದರ ಪೂರ್ವಬಾವಿ ಸಭೆಯು ಬೆಳ್ತಂಗಡಿ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಯಿತು.
ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಅಧ್ಯಕ್ಷ ವೆಂಕಟೇಶ್ ಭಟ್ ಕಜೆ, ಪ್ರಗತಿಬಂಧು ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷ ಸೀತಾರಾಮ್, ಬೆಳ್ತಂಗಡಿ ಯೋಜನಾಧಿಕಾರಿ ಯಶೋಧರ್, ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್ ಬಿ., ಹರೀಶ್ ಕುಮಾರ್, ಜಗದೀಶ್ ರೈ ಮೈರಾ, ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಎಲ್ಲಾ ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು,ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.

ಕೋಟ್ಯಾಂತರ ಭಕ್ತರ ಆರಾಧ್ಯ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಲ್ಲರೂ ಉಪಸ್ಥಿತಿಯಲ್ಲಿ ಸಮಿತಿಯಲ್ಲಿ ತೀರ್ಮಾನಿಸಲಾಯಿತು. ಮಾನ್ಯ ಪ್ರಾರ್ಥನೆ ಹಾಡಿದರು. ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here