Site icon Suddi Belthangady

ಯುಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ ನಿಯೋಗ

ಉಜಿರೆ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ್ದಾರೆಂದು ಹಲ್ಲೆಗೊಳಗಾದ ಯುಟ್ಯೂಬರ್ ಗಳು ಚಿಕಿತ್ಸೆ ಪಡೆಯುತ್ತಿರುವ ಉಜಿರೆ ಆಸ್ಪತ್ರೆಗೆ ಎಸ್.ಡಿ.ಪಿ.ಐ ನಿಯೋಗ ಭೇಟಿ ಮಾಡಿತು.

ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ., ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮೂನಿಶ್ ಅಲಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಅಬೂಬಕ್ಕರ್ ಮದ್ದ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಹಾಗೂ ಪಕ್ಷದ ಮುಖಂಡರು ನಿಯೋಗದಲ್ಲಿದ್ದರು. ಈ ಸಂದರ್ಭದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಮಾವ ವಿಠಲ್ ಗೌಡ ಜೊತೆಗಿದ್ದರು.

Exit mobile version